26 01 23 Republic Day & Sankalpa Utsava @ RVK Dharwad

Dharwad, Jan. 26: 74th Republic Day celebrations and Sankalpa Utsava for 10th class students held herein Rashtrotthana Vidya Kendra – Dharwad.

ಗಣರಾಜ್ಯೋತ್ಸವ ಹಾಗೂ ಸಂಕಲ್ಪ ಉತ್ಸವ – ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಧಾರವಾಡದಲ್ಲಿ

ಧಾರವಾಡ, ಜ. 26: “ಪ್ರಜಾಪ್ರಭುತ್ವದ ಯಶಸ್ಸು ಸಾಮಾನ್ಯ ಜನರ ಕೈಯಲ್ಲಿದೆ. ಹೀಗಾಗಿ ದೇಶದ ಯುವಜನತೆ, ವಿದ್ಯಾರ್ಥಿಗಳು ತಮ್ಮ ಹೊಣೆಯನ್ನು ಅರಿತು ನಡೆಯಬೇಕು, ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾದ್ದರಿಂದ ಬಲಿಷ್ಠ ರಾಷ್ಟ್ರವನ್ನು ಕಟ್ಟುವ ಗುರುತರ ಜವಾಬ್ದಾರಿ ಇಂದಿನ ಮಕ್ಕಳ ಮೇಲಿದೆ” ಎಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ, ಧಾರವಾಡದ ಪ್ರಾಚಾರ್ಯರಾದ ಡಾ. ಅನಿತಾ ರೈ ಅವರು ಅಭಿಪ್ರಾಯಸಿ ಸಂವಿಧಾನದ ರಚನೆ ಮತ್ತು ಮಹತ್ವದ ಕುರಿತು ಮಾತನಾಡಿದರು.

ಶಾಲೆಯ ಆಡಳಿತಾಧಿಕಾರಿಗಳಾದ ಶ್ರೀ ಕುಮಾರಸ್ವಾಮಿ ಕುಲಕರ್ಣಿ ಇವರು ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಯವರು ಹಾಗೂ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

10ನೇ ವರ್ಗದ ಮಕ್ಕಳಿಗೆ ಸಂಕಲ್ಪ ಉತ್ಸವ

“ರಾಷ್ಟ್ರೋತ್ಥಾನ ಶಾಲೆ ಭಾರತೀಯ ಸಂಸ್ಕೃತಿಯಲ್ಲಿ ಶಿಕ್ಷಣ ಹಾಗೂ ಉತ್ತಮ ಸಂಸ್ಕಾರ ಕೊಡುವ ಶಾಲೆಗಳಲ್ಲಿ ಒಂದಾಗಿ ಬೆಳೆಯುತ್ತಿದೆ. ಇಲ್ಲಿ ಮಕ್ಕಳನ್ನು ದೇಶದ ಆಸ್ತಿಗಳನ್ನಾಗಿ ಮಾಡಲಾಗುತ್ತಿದೆ. ಮಕ್ಕಳು ಶಾಲೆಯಲ್ಲಿ ಪಡೆದ ಸಂಸ್ಕಾರವನ್ನು ತಮ್ಮ ಮುಂದಿನ ಜೀವನದಲ್ಲಿ ಅಳವಡಿಸಿಕೊಂಡು ಮುಂದುವರಿಯಬೇಕು. ಎದುರಾಗುವ ಕಷ್ಟಗಳನ್ನು ಧೈರ್ಯದಿಂದ ಎದುರಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ದೇಶಕ್ಕಾಗಿ ಏನಾದರು ಮಾಡುತ್ತೇವೆ ಎನ್ನುವ ಛಲ ನಿಮ್ಮದಾಗಬೇಕು” ಎಂದು ಹುಬ್ಬಳ್ಳಿಯ ಶ್ರೀಮಾತಾ ಆಶ್ರಮದ ಪೂಜ್ಯ ಮಾತಾ ತೇಜೋಮಯಿಯವರು ಆಶೀರ್ವದಿಸಿದರು. ವಿದ್ಯಾಕೇಂದ್ರದ 10ನೇ ವರ್ಗದ ವಿದ್ಯಾರ್ಥಿಗಳ ಸಂಕಲ್ಪೋತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಕಾರ್ಯದರ್ಶಿಗಳಾದ ಶ್ರೀ ರಾಘವೇಂದ್ರ ಅಂಬೇಕರ್ ಪ್ರಸ್ತಾವಿಕ ನುಡಿಗಳನ್ನಾಡಿದರು. ಶಾಲೆಯ ಪ್ರಾಚಾರ್ಯರಾದ ಡಾ. ಅನಿತಾ ರೈ ಅವರು 10ನೇ ತರಗತಿ ಮಕ್ಕಳಿಗೆ ಸಂಕಲ್ಪವನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿಗಳಾದ ಶ್ರೀ ಕುಮಾರಸ್ವಾಮಿ ಕುಲಕರ್ಣಿ, 10ನೇ ವರ್ಗದ ಮಕ್ಕಳ ಪಾಲಕರು, ವಿದ್ಯಾರ್ಥಿಗಳು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವೇದ ಘೋಷ, ಭಗವದ್ಗೀತೆ ಪಠಣ, ಸರಸ್ವತಿ ಹೋಮ, ಸಂಕಲ್ಪ ಬೋಧನೆ, ಮಾತಾ-ಪಿತೃ ಪಾದಪೂಜೆ ಮುಂತಾದ ಕಾರ್ಯಕ್ರಮಗಳು ನಡೆದವು.

Scroll to Top