Dharwad, Feb 28: National Science Day and Science Week were celebrated here in Rashtrotthana Vidya Kendra. Dr. S D Dummavada, Asst. Professor at Dharwad Karnataka Science College, graced Science Day celebration. Prior this for 7 days Science Week was celebrated and in that essay writing competition, science exhibition, chart writing competition, competition of recognising Indian scientists, Rangoli competitions were held.
—
ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಧಾರವಾಡದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ಸಪ್ತಾಹ
ಧಾರವಾಡ, ಫೆ.28: “ವಿಜ್ಞಾನ-ತಂತ್ರಜ್ಞಾನ ಭಾರತದ ಶಕ್ತಿ. ಕೃಷಿ, ಆರ್ಥಿಕ, ಸಾಮಾಜಿಕ ಸ್ಥಿತಿಗಳ ಸುಧಾರಣೆ ಹಾಗೂ ಭಾರತವನ್ನು ಒಗ್ಗೂಡಿಸುವಲ್ಲಿ ವಿಜ್ಞಾನದ ಪಾತ್ರ ಬಹುಮುಖ್ಯವಾಗಿದೆ. ದೇಶದ ಅಭಿವೃದ್ಧಿ ವಿಜ್ಞಾನದ ಮೇಲೆ ನಿಂತಿದೆ. ವೈಜ್ಞಾನಿಕ ಜಗತ್ತಿನಲ್ಲಿ ಭಾರತವನ್ನು ಮೇರು ಶಿಖರಕ್ಕೆ ಕೊಂಡೊಯ್ದ ವಿಜ್ಞಾನಿ ಸರ್ ಸಿ. ವಿ. ರಾಮನ್ ಅವರ ಅಪೂರ್ವ ಸಾಧನೆಗಳ ನೆನಪಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಜನಸಾಮಾನ್ಯರಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದು ಈ ದಿನದ ಉದ್ದೇಶವಾಗಿದೆ” ಎಂದು ಧಾರವಾಡದ ಕರ್ನಾಟಕ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಎಸ್. ಡಿ. ದುಮ್ಮವಾಡ ಅವರು ಹೇಳಿದರು. ಇಲ್ಲಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ಕಾರ್ಯಕ್ರಮದ ಮುಖ್ಯ ವಕ್ತಾರರಾಗಿ ಅವರು ಮಾತನಾಡಿದರು.
ಶಾಲೆಯಲ್ಲಿ ಕಳೆದ 7 ದಿನಗಳಿಂದ ವಿಜ್ಞಾನ ಸಪ್ತಾಹವನ್ನು ಆಚರಿಸಲಾಯಿತು. ವಿಜ್ಞಾನ ಸಪ್ತಾಹದಲ್ಲಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ವಿಜ್ಞಾನ ವಸ್ತುಪ್ರದರ್ಶನ, ಚಾರ್ಟ್ ಬರೆಯುವ ಸ್ಪರ್ಧೆ, ಭಾರತೀಯ ವಿಜ್ಞಾನಿಗಳನ್ನು ಪರಿಚಯಿಸುವ ಸ್ಪರ್ಧೆ, ರಂಗೋಲಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಈ ಸಂದರ್ಭದಲ್ಲಿ ಬಹುಮಾನವನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಪ್ರಾಚಾರ್ಯರಾದ ಶ್ರೀಮತಿ ಡಾ. ಅನಿತಾ ರೈ, ಆಡಳಿತಾಧಿಕಾರಿಗಳಾದ ಶ್ರೀ ಕುಮಾರಸ್ವಾಮಿ ಕುಲಕರ್ಣಿ, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.